ಬೆಂಗಳೂರು : ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ನಿರ್ಧಾರ ಮಾಡಿತ್ತು. ಇದನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ಬೊಮ್ಮಾಯಿ ಸರ್ಕಾರ ಪ್ಲಾನ್ ಮಾಡಿದೆ.
ಇದೇ 20ರಂದು ಅಂದ್ರೆ ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ.
ಬೆಳಗಾವಿಯಲ್ಲಿ ನಡೆಯೋ ಚಳಿಗಾಲದ ಅಧಿವೇಶನದಲ್ಲಿ ಮೀಸಲಾತಿ ಹೆಚ್ಚಳ ಕುರಿತ ವಿಧೇಯಕ ಮಂಡಿಸಲಿದ್ದಾರೆ.
ಈ ಮಧ್ಯೆ ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆ ಇಟ್ಟಿದೆ. ಕೋಲಾರದಲ್ಲಿ ಮಾತನಾಡಿದ ಆದಿಚುಂಚನಗಿರಿ ಮಠದ ಸ್ವಾಮೀಜಿ, ಶೇಕಡಾ 4ರಷ್ಟಿರುವ ಒಕ್ಕಲಿಗ ಸಮುದಾಯದ ಮೀಸಲಾತಿಯನ್ನು ಶೇಕಡಾ 12ಕ್ಕೆ ಹೆಚ್ಚಳ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.