Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹೆಚ್ಚಿದ ನಿಫಾ ವೈರಸ್ ಭೀತಿ ! ಮದರಸಾಗಳಿಗೂ ರಜೆ ವಿಸ್ತರಣೆ

ಹೆಚ್ಚಿದ ನಿಫಾ ವೈರಸ್ ಭೀತಿ ! ಮದರಸಾಗಳಿಗೂ ರಜೆ ವಿಸ್ತರಣೆ
ತಿರುವನಂತಪುರಂ , ಶುಕ್ರವಾರ, 15 ಸೆಪ್ಟಂಬರ್ 2023 (08:22 IST)
ತಿರುವನಂತಪುರಂ : ಇಬ್ಬರನ್ನು ನಿಫಾ ವೈರಸ್ ಹರಡುವಿಕೆ ತಡೆಗಟ್ಟಲು ಕೇರಳ ಸರ್ಕಾರ ಕೋಝಿಕೋಡ್ನ ಶಾಲಾ-ಕಾಲೇಜುಗಳಿಗೆ ನೀಡಿರುವ ರಜೆಯನ್ನ ಸೆಪ್ಟೆಂಬರ್ 16ರ ವರೆಗೆ ವಿಸ್ತರಣೆ ಮಾಡಿದೆ.

ನಿಫಾ ವೈರಸ್ಗೆ ಇಬ್ಬರು ಸಾವನ್ನಪ್ಪಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ಸೆಪ್ಟೆಂಬರ್ 14 ಮತ್ತು 15 ರಂದು ರಜೆ ಘೋಷಣೆ ಮಾಡಿತ್ತು. ಕೋಝಿಕೋಡ್ ಜಿಲ್ಲೆಯ ಅಂಗನವಾಡಿಗಳು, ಮದರಸಾಗಳು, ಟ್ಯೂಷನ್ ಸೆಂಟರ್ಗಳು ಸೇರಿದಂತೆ ವೃತ್ತಿಪರ ಕಾಲೇಜುಗಳೂ ಸೇರಿದಂತೆ ಎಲ್ಲ ರೀತಿಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಆದ್ರೆ ವಿಶ್ವವಿದ್ಯಾಲಯ ಮತ್ತು ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷಾ ವೇಳಾಪಟ್ಟಿಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಶಿಕ್ಷಣ ಸಂಸ್ಥೆಗಳು ಆನ್ಲೈನ್ ತರಗತಿಗಳನ್ನ ಏರ್ಪಡಿಸುವಂತೆ ಒತ್ತಾಯಿಸಿವೆ.

ಈ ದಿನಗಳು ಸಂಭ್ರಮಾಚರಣೆಯ ದಿನಗಳಾಗಬಾರದು, ಅನಗತ್ಯ ಪ್ರಯಾಣ ಮತ್ತು ಸಮಾರಂಭ ಆಯೋಜನೆ ಮಾಡುವುದನ್ನ ತಪ್ಪಿಸಬೇಕು ಅಂತಲೂ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ದೆಹಲಿಯಲ್ಲೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಚರ್ಚೆ ನಡೆಸಿರುವುದಾಗಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. 

ಕೋಯಿಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ.

ಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ದೇವಸ್ಥಾನಗಳ ಬಳಿ ತಂಬಾಕು ಉತ್ಪನ್ನ ಮಾರಾಟ ನಿಷೇಧ