ನವದೆಹಲಿ : ಕೊರೊನಾ ವಿರುದ್ಧ ಲಸಿಕಾ ಅಭಿಯಾನ ನಡೆಸುತ್ತಿರುವ ಭಾರತ ಈವರೆಗೆ 165 ಕೋಟಿ ಡೋಸ್ ಲಸಿಕೆ ನೀಡಿದೆ. ಈ ಕುರಿತಾಗಿ ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 56 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಶನಿವಾರದ ಹೊತ್ತಿಗೆ ಭಾರತದಲ್ಲಿ 165.04 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಭಾರತವು ಈಗ 165 ಕೋಟಿಗೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಜನವರಿ 3 ರಂದು 15ರಿಂದ 18ರ ವರೆಗಿನ ವಯಸ್ಸಿನವರಿಗೂ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಈವರೆಗೆ 4.5 ಕೋಟಿ ಮಕ್ಕಳು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.