ಮುಂಬೈ : ಮಹಾರಾಷ್ಟ್ರದಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟು ಕ್ಷಣ ಕ್ಷಣವೂ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ.
ʻಮಹಾವಿಕಾಸ ಆಘಾಡಿʼ ಮೈತ್ರಿಕೂಟದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಆಶಯವನ್ನು ಉದ್ಧವ್ ಠಾಕ್ರೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆಯ ಏಕನಾಥ್ ಶಿಂಧೆ ಅವರು ಮುಂದಿನ ಸಿಎಂ ಆಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬಂಡಾಯ ಶಮನ ಮಾಡಲು ಏಕನಾಥ ಶಿಂಧೆ ಅವರನ್ನೇ ರಾಜ್ಯದ ಮುಖ್ಯಮಂತ್ರಿ ಮಾಡುವ ಕುರಿತು ಮೈತ್ರಿಕೂಟದ ಕಾಂಗ್ರೆಸ್ ಹಾಗೂ ಎನ್ಸಿಪಿ ಸಲಹೆ ನೀಡಿದೆ ಎಂದು ಮೂಲಗಳು ತಿಳಿಸಿವೆ.