Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಒತ್ತಾಯಕ್ಕೆ ಮಣಿದು ಹೈಕಮಾಂಡ್ ತೀರ್ಮಾನದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ರಾತ್ರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನಿನ್ನೆ ನೀಡಿದ್ದ ಹೇಳಿಕೆಯಂತೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನಾನಲ್ಲ ಅಪರಾಧ ಎಸಗಿಲ್ಲ ಎನ್ನುವ ಮಾತನ್ನು ಪುನರುಚ್ಚರಿಸುತ್ತಿರುವ ಈಶ್ವರಪ್ಪ ಹೈಕಮಾಂಡ್ ಸೂಚನೆಯ ಮೇರೆಗೆ ಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮುನ್ನ, ಈಶ್ವರಪ್ಪ ಸಚಿವರಾಗಿ ಶಿವಮೊಗ್ಗದ ಶುಭಶ್ರೀ ಸಮುದಾಯ ಭವನವನ್ನು ಉದ್ಘಾಟಿಸಿದರು. ಈ ವೇಳೆ ಈಶ್ವರಪ್ಪ ಬೆಂಬಲಿಗರು, ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ಕೊಡಬಾರದು ಎಂದು ಒತ್ತಾಯಿಸಿದರು.