ನವದೆಹಲಿ : ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಆದಾಯ ತೆರಿಗೆ ಇಲಾಖೆ ಪ್ರಕರಣದಲ್ಲಿ ಶಾಕಿಂಗ್ ಸುದ್ದಿ ಪ್ರಕಟವಾಗಿದೆ.
ಐಟಿ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 2018 ರಲ್ಲಿ ಬಿಡದಿಯ ಈಗಲ್ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದ ಐಟಿ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಐಟಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ.ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ. ಅಷ್ಟೇ ಅಲ್ಲದೇ 4 ವಾರದ ಒಳಗಡೆ ಹೊಸ ಅರ್ಜಿ ಸಲ್ಲಿಕೆ ಮಾಡುವಂತೆ ಐಟಿಗೆ ಸೂಚಿಸಿದೆ.