Publish Date: Mon, 26 Jun 2023 (07:50 IST)
Updated Date: Mon, 26 Jun 2023 (10:51 IST)
ಬೆಂಗಳೂರು : ಬೆಂಗಳೂರು ನಗರದಲ್ಲಿ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆರಾಯ ತಂಪೆರಿದಿದ್ದಾನೆ. ಸೋಮವಾರ ಸಹ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂ.26 ರಿಂದ 29ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು ಸಾರ್ವಜನಿಕರು ಎಚ್ಚರಿಕೆವಹಿಸುವಂತೆ ಇಲಾಖೆ ತಿಳಿಸಿದೆ.
ನಗರದಲ್ಲಿ ಇಂದು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ.