ಬೆಂಗಳೂರು : ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ, ನಟಿ ಜಯಮಾಲಾ ಅವರನ್ನು ಮೇಲ್ಮನೆ ಸಭಾನಾಯಕರನ್ನಾಗಿ ನೇಮಕ ಮಾಡುವುದಕ್ಕೆ ಇದೀಗ ಕಾಂಗ್ರೆಸ್ ನ ಹಿರಿಯ ವಿಧಾನ ಪರಿಷತ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಉಗ್ರಪ್ಪ, ಎಚ್.ಎಂ.ರೇವಣ್ಣ ಹಾಗೂ ಮತ್ತಿತರರು ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಜಯಮಾಲಾ ಅವರನ್ನು ಸಭಾನಾಯಕರನ್ನಾಗಿ ನೇಮಿಸುವುದನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಒಂದು ವೇಳೆ ಆಕ್ಷೇಪದ ನಡುವೆಯೂ ನೇಮಿಸಿದರೆ ನಾವ್ಯಾರೂ ಪರಿಷತ್ ಸಭಾ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಇದಕ್ಕೆ ವೇಣುಗೋಪಾಲ್ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯದ ಕಾರಣ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವುದಾಗಿ ಸದಸ್ಯರು ನಿರ್ಧಾರ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ