ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಮತ್ತು ಮೂರನೇ ಸ್ಥಾನಕ್ಕೆ ಜಾರಿದರೂ ಸರ್ಕಾರ ರಚಿಸಲು ಸರ್ಕಸ್ ಮಾಡುತ್ತಿದ್ದಾರೆ.
ಕಾಂಗ್ರೆಸ್ ಹಿನ್ನಡೆ ಸುದ್ದಿ ತಿಳಿದು ಬರುತ್ತಿದ್ದಂತೇ ಹಿರಿಯ ನಾಯಕರು ಸಿದ್ದರಾಮಯ್ಯ ಮನೆಯಲ್ಲಿ ಸಭೆ ಸೇರಿ ಜೆಡಿಎಸ್ ಜತೆ ಸೇರುವ ನಿರ್ಧಾರಕ್ಕೆ ಬಂದಿದ್ದರು. ಫಲಿತಾಂಶ ಅಂತಿಮ ಹಂತಕ್ಕೆ ಬರುತ್ತಿದ್ದಂತೇ ಬಿಜೆಪಿ ಉಸಿರೆತ್ತುವ ಮೊದಲೇ ಕಾಂಗ್ರೆಸ್ ಜೆಡಿಎಸ್ ಗೆ ಬಂಪರ್ ಆಫರ್ ನೀಡಿ ಅಧಿಕಾರ ಉಳಿಸಿಕೊಳ್ಳಲು ಯಶಸ್ವಿಯಾಗಿದೆ.
ನಿನ್ನೆ ರಾಜಭವನಕ್ಕೆ ಭೇಟಿ ನೀಡಿ ಸರ್ಕಾರ ರಚಿಸಲು ಹಕ್ಕು ನೀಡುವಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಜಂಟಿಯಾಗಿ ತೆರಳಿ ಪತ್ರ ಸಲ್ಲಿಸಿದ ಬಳಿಕ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಸಭೆ ಸೇರಿದ್ದಾರೆ.
ಹೋಟೆಲ್ ನ 523 ನೇ ನಂಬರ್ ನ ಕೊಠಡಿಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ, ಕುಮಾರಸ್ವಾಮಿ ಜತೆಗೆ ಸಿಎಂ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್ ಭಾರೀ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ತಾವು ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.