ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಮಾಡಲು ಹೊರಟಿದ್ದ ಕಾಂಗ್ರೆಸ್ ನಾಯಕರಿಗೆ ಪಾಲುದಾರ ಪಕ್ಷ ಜೆಡಿಎಸ್ ಶಾಕ್ ಕೊಟ್ಟಿದೆ.
ಶೀಘ್ರವೇ ಸಂಪುಟ ವಿಸ್ತರಣೆ ಮಾಡಲು ಡಿಸಿಎಂ ಪರಮೇಶ್ವರ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಳಿ ಮಾತುಕತೆ ನಡೆಸಿ ಒಪ್ಪಿಗೆ ಪಡೆದಿದ್ದರು. ಆದರೆ ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡಲು ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಸಚಿವ ಎಚ್ ಡಿ ರೇವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇದಕ್ಕೆ ಕಾರಣ ಆಷಾಢ ಮಾಸ! ಜುಲೈ 14 ರಿಂದ ಅಗಸ್ಟ್ 11 ರವರೆಗೆ ಆಷಾಢ ಮಾಸ ಇರುವುದರಿಂದ ಈ ವೇಳೆ ಸಂಪುಟ ವಿಸ್ತರಣೆ ಮಾಡಲು ಜೆಡಿಎಸ್ ನ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸ್ವತಃ ಪರಮೇಶ್ವರ್ ಕೂಡಾ ಜೆಡಿಎಸ್ ನಾಯಕರ ಮಾತಿಗೆ ಮನ್ನಣೆ ನೀಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಸಂಪುಟ ವಿಸ್ತರಣೆ ತಲೆನೋವು ಸದ್ಯಕ್ಕೆ ದೂರ ಮಾಡಿ, ಸಂಭಾವ್ಯ ಭಿನ್ನಮತ ತಡೆಯುವ ಉದ್ದೇಶ ಅವರದ್ದು ಎನ್ನಲಾಗಿದೆ. ಅಂತೂ ಸಚಿವಾಕಾಂಕ್ಷಿಗಳಿಗೆ ನಿರಾಶೆಯಾಗಿರುವುದಂತೂ ಸತ್ಯ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.