ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡಿರುವುದಕ್ಕೆ ಜೆಡಿಎಸ್ ರಾಷ್ಟ್ರೀಯ ವಕ್ತಾರ ಡ್ಯಾನಿಷ್ ಆಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಹೃದಯದ ಸಮಸ್ಯೆಯಿಂದ ಬಳಲುತ್ತಿರುವ ಕುಮಾರಸ್ವಾಮಿಗೆ ಸವಾಲು ಒಡ್ಡಿದ್ದಾರೆ. ವ್ಯಕ್ತಿಯ ಅನಾರೋಗ್ಯವನ್ನು ಅಣಕಿಸುವುದು ಸರಿಯಲ್ಲ. ದೈಹಿಕ ಫಿಟ್ನೆಸ್ ಮಾತ್ರ ಮುಖ್ಯವಾಗಿದ್ದರೆ ಪ್ರಧಾನಿ ಮತ್ತು ಮುಖ್ಯಮಂತ್ರಿಗಳಾಗಿ ಪೈಲ್ವಾನರು ಅಥವಾ ಬೌನ್ಸರ್ಗಳನ್ನು ನಾವು ಹೊಂದಿರಬೇಕಾಗುತ್ತದೆ. ಆಡಳಿತ ನಡೆಸುವುದಕ್ಕಾಗಿ ಜನರು ಪ್ರಧಾನಿ ಮತ್ತು ಮುಖ್ಯಮಂತ್ರಿಗಳನ್ನು ನೇಮಿಸುತ್ತಾರೆ. ರಾಜ್ಯ ಮತ್ತು ದೇಶದ ಅಭಿವೃದ್ಧಿಯೇ ಮುಖ್ಯವಾಗಬೇಕು' ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ