Publish Date: Thursday, 15 September 2022 (07:23 IST)
Updated Date: Thursday, 15 September 2022 (01:04 IST)
ಚಿತ್ರದುರ್ಗ : ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿಲ್ಲ.
ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳಿಗೆ ವಿಸ್ತರಿಸಲಾಗಿದೆ.
ಸೆ.27ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶ ಬುಧವಾರ ಹೊರಡಿಸಿದೆ.
ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಇಂದಿಗೆ ಕೊನೆಯಾಗಿತ್ತು. ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ, ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶಿಸಿದೆ.