Webdunia - Bharat's app for daily news and videos

Install App

ಕನ್ನಡ ನಾಡು ನುಡಿಯ ಪ್ರತೀಕವೇ ಕನ್ನಡ ರಾಜ್ಯೋತ್ಸವ

Webdunia
ಮಂಗಳವಾರ, 1 ನವೆಂಬರ್ 2022 (06:06 IST)
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.
 
ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.

ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಇತಿಹಾಸ
•             ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು ೧೯೦೫ ರಲ್ಲಿ ಪ್ರಾರಂಭಿಸಿದರು. ೧೯೫೦ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.

•             ೧೯೫೬ ರ ನವೆಂಬರ್ ೧ ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.

•             ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು "ಮೈಸೂರು" ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ ೧, ೧೯೭೩ ರಂದು "ಕರ್ನಾಟಕ" ಎಂದು ಬದಲಾಯಿತು.

ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ ("ಜಯ ಭಾರತ ಜನನಿಯ ತನುಜಾತೆ")ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments