ಕೇದಾರನಾಥ ಯಾತ್ರೆ ಸ್ಥಗಿತ!

Webdunia
ಭಾನುವಾರ, 10 ಜುಲೈ 2022 (10:37 IST)
ಡೆಹ್ರಾಡೂನ್ : ಭಾರೀ ಮಳೆಯಿಂದಾಗಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಅಮರನಾಥದಲ್ಲಿ ನಡೆದ ಘಟನೆ ಬೆನ್ನಲ್ಲೆ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂದು ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದ್ದು, ನಿನ್ನೆ ಸಂಜೆ ಅಮರನಾಥದಲ್ಲಿ ಏಕಾಏಕಿ ಸೃಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ ಹಾಕಲಾಗಿದ್ದ ಶಿಬಿರಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದೆ. ಇದುವರೆಗೆ 16 ಜನರು ಮೃತಪಟ್ಟಿದ್ದಾರೆ. 

ದೇಶಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹ ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನ ಪರಿಷತ್ ಚುನಾವಣೆ ಅಡ್ಡಮತದಾನ: ದ್ರೋಹ ಬಗೆದವರ ವಿರುದ್ಧ ಕ್ರಮ ಶುರು

ಮೆಟ್ರೋ ವಿಸ್ತರಣೆಯಲ್ಲಿ ವೇಗಗೊಳಿಸುವಂತೆ ತೇಜಸ್ವಿ ಸೂರ್ಯ ಒತ್ತಾಯ

ಉಡುಪಿ: ಅಕ್ರಮ ಶಿಶು ದತ್ತು, ಕಳ್ಳಸಾಗಣೆ ಪ್ರಕರಣ, ವೈದ್ಯ, ದಂಪತಿ, ವ್ಯಕ್ತಿಯ ಬಂಧನ

ಇದೇ 25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್‌ಖಾನ್‌

ಅಬ್ಬಾ… ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ನಾಯಿ ಹುಡುಕಿ ಕೊಟ್ಟವರಿಗೆ ಸಿಕ್ಕ ಬಹುಮಾನ ಮೊತ್ತ ಇಷ್ಟೊಂದಾ…

ಮುಂದಿನ ಸುದ್ದಿ
Show comments