Publish Date: Sun, 12 Aug 2018 (09:22 IST)
Updated Date: Sun, 12 Aug 2018 (09:24 IST)
ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು ಪ್ರವಾಹ ಪರಿಸ್ಥಿತಿ ಇದೆ. ಇಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
60 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದೆ. ನದಿ, ಅಣೆಕಟ್ಟುಗಳು ತುಂಬಿ ಹರಿಯುತ್ತಿದ್ದು, ಮೃತರ ಸಂಖ್ಯೆ 37 ಕ್ಕೇರಿದೆ.
ನಿನ್ನೆ ಸಿಎಂ ಪಿಣರಾಯಿ ವಿಜಯನ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಕರ್ನಾಟಕ ಕೂಡಾ ನೆರೆಯ ಕೇರಳಕ್ಕೆ ಸಹಾಯ ಹಸ್ತ ಚಾಚಿದ್ದು, 10 ಕೋಟಿ ರೂ. ಮತ್ತು ವೈದ್ಯರ ತಂಡವನ್ನು ಕಳುಹಿಸಿಕೊಟ್ಟಿದೆ. ಇಂದೂ ಕೂಡಾ ಭಾರೀ ಮಳೆ ಮುಂದುವರಿದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.