ಬೆಂಗಳೂರು : ಪ್ರತಿ ಲೀಟರ್ಗೆ ಹಾಲಿನ ದರ 3 ರೂಪಾಯಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಪ್ರಸ್ತಾವ ಸಲ್ಲಿಸಿದೆ.
15 ಹಾಲು ಒಕ್ಕೂಟಗಳು ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿವೆ. ಕಳೆದ ಮೂರು ವರ್ಷಗಳ ಹಿಂದೆ ಸರ್ಕಾರ ಹಾಲಿನ ದರ ಪ್ರತಿ ಲೀಟರ್ಗೆ 2 ರೂ. ಏರಿಕೆ ಮಾಡಿತ್ತು.
ಬಳಿಕ ಸರ್ಕಾರ ಹಾಲಿನ ದರವನ್ನು ಏರಿಕೆ ಮಾಡಲೇ ಇಲ್ಲ. ಹಲವು ಬಾರಿ ಸರ್ಕಾರಕ್ಕೆ ದರ ಏರಿಕೆ ಪ್ರಸ್ತಾವ ಸಲ್ಲಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಆದರೆ ಈ ಬಾರಿ ದರ ಏರಿಕೆ ಮಾಡಲೇಬೇಕು ಎಂದು ಕೆಎಂಎಫ್ ಒತ್ತಾಯಿಸಿದೆ.
ಈಗ ಲೀಟರ್ಗೆ 37 ರೂಪಾಯಿ ನೀಡುತ್ತಿದ್ದಾರೆ. 3 ರೂಪಾಯಿ ದರ ಏರಿಕೆ ಮಾಡಿದರೆ, 40 ರೂಪಾಯಿ ಏರಿಕೆ ಆಗಲಿದೆ. ಬೇರೆ ರಾಜ್ಯಗಳಲ್ಲಿ ಹೆಚ್ಷಿನ ಬೆಲೆಗೆ ಹಾಲು ಮಾರಾಟ ಮಾಡುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಕೆಎಂಎಫ್ನಿಂದ ಕಡಿಮೆ ಬೆಲೆಗೆ ಹಾಲು ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ದರ ಏರಿಕೆ ಪ್ರಸ್ತಾವವನ್ನು ಸರ್ಕಾರದ ಮುಂದಿಡಲಾಗಿದೆ.