Webdunia - Bharat's app for daily news and videos

Install App

‘ನಾಗರಪಂಚಮಿ’ ವಿಶೇಷತೆ ಏನು ತಿಳಿಯಿರಿ?

Webdunia
ಮಂಗಳವಾರ, 2 ಆಗಸ್ಟ್ 2022 (07:07 IST)
ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸುವ ಹಬ್ಬವೇ ‘ನಾಗರಪಂಚಮಿ’. ನಾಗರ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ.

ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿರುವ ಜಾಗಕ್ಕೆ ಹೋಗಿ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ. ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಸಹ ಇದೆ.

ಪಂಚಮಿಯ ವೈಶಿಷ್ಟ್ಯ

ಸಾತ್ತ್ವಿಕತೆ ಗ್ರಹಿಸಲು ನಾಗರಪಂಚಮಿ ಉಪಯುಕ್ತ ಕಾಲ. ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಿದರೆ ಒಳ್ಳೆಯದು.

ಪ್ರಾರ್ಥನೆಯ ವೇಳೆ, ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣದ ಶುದ್ಧಿಯಾಗಲಿ. ನಾಗದೇವತೆಯು ಸಂಪೂರ್ಣ ಬ್ರಹ್ಮಾಂಡದ ಕುಂಡಲಿನಿಯಾಗಿದ್ದಾನೆ. ಪಂಚಪ್ರಾಣವೆಂದರೆ ಪಂಚಭೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷ್ಮರೂಪವಾಗಿದೆ ಎಂದು ಪುರಾಣಗಳಲ್ಲಿ ನಂಬಲಾಗಿದೆ.

ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದ ಕೂಡಿರುತ್ತದೆ. `ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಕರಿ ಸೀರೆ ಉಡಿಸಾಕ’ ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ.

ಉಪವಾಸದ ಮಹತ್ವ ಏನು?

ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವವೆಂದರೆ ಈ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ ಹೊಂದಿದನು. ಆಗ ಸಹೋದರನ ಸಾವಿನಿಂದ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಅದಕ್ಕೆ ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಅದಕ್ಕೆ ಆ ದಿನ ಮಹಿಳೆಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ.

ಸಹೋದರನಿಗೆ ಅಖಂಡ ಆಯುಷ್ಯ ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟಗಳಿಂದ ಪಾರಾಗಲಿ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ. ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ. ಅವನ ರಕ್ಷಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments