Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಕೋವಿಡ್ ಚಿಕಿತ್ಸೆಗಾಗಿ ಅಭಿವೃದ್ಧಿಪಡಿಸಿರುವ ವಿಶ್ವದ ಮೊದಲ ಗುಳಿಗೆ ಭಾರತದಲ್ಲೂ ಉತ್ಪಾದನೆಯಾಗುವ ಸಾಧ್ಯತೆ ಇದೆ.
ಅಮೆರಿಕ ಮೂಲದ ಮೆರ್ಕ್ ಆ್ಯಂಡ್ ಕೋ ಅಭಿವೃದ್ಧಿಪಡಿಸಿರುವ ಮೋಲ್ನುಪಿರಾವಿರ್ ಗುಳಿಗೆಯನ್ನು ಭಾರತದಲ್ಲೂ ಉತ್ಪಾದಿಸಲು ಅನುಮತಿ ಕೋರಿ ಹೈದ್ರಾಬಾದ್ ಮೂಲದ ಆಪ್ಟಿಮಸ್ ಫಾರ್ಮಾ, ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ. ಈ ಗುಳಿಗೆ ಬಳಸಲು ಅಮೆರಿಕ ಸರ್ಕಾರ ಇನ್ನೂ ಅಂತಿಮ ಅನುಮೋದನೆ ನೀಡಿಲ್ಲ.
ಭಾರತದಲ್ಲಿ ಗುಳಿಗೆಯ ತುರ್ತು ಬಳಕೆಗೆ ಒಂದೊಮ್ಮೆ ಅನುಮೋದನೆ ದೊರೆತರೆ ಕಂಪನಿಯು ತಿಂಗಳಲ್ಲಿ 8 ಕೋಟಿ ಗುಳಿಗೆಗಳನ್ನು ಉತ್ಪಾದಿಸಲಿದೆ. ಪ್ರತಿ ಗುಳಿಗೆಗೆ ಅಂದಾಜು 30 ರು.ದರ ಇರಲಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಒಬ್ಬ ಕೋವಿಡ್ ರೋಗಿಯು ಚಿಕಿತ್ಸೆಗಾಗಿ ಇಂಥ 40 ಗುಳಿಗೆಗಳನ್ನು ನುಂಗಬೇಕಾಗುತ್ತದೆ. ಅದಕ್ಕೆ ಒಟ್ಟು ಅಂದಾಜು 1196 ರು. ವೆಚ್ಚ ತಗುಲಬಹುದು ಎಂದು ತಿಳಿಸಿದ್ದಾರೆ.