ನವದೆಹಲಿ: ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಈಗಾಗಲೇ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಸೆಪ್ಟೆಂಬರ್ ನಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ನಿರ್ದೇಶಕಿ ಪ್ರಿಯಾ ಅಬ್ರಹಂ ಹೇಳಿದ್ದಾರೆ.
ಸಂದರ್ಶನ ಒಂದರಲ್ಲಿ ಮಾತನಾಡಿದ ಪ್ರಿಯಾ ಅಬ್ರಹಾಂ ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆಗಳು ಲಭ್ಯವಾಗಬಹುದು. 2 ರಿಂದ 18 ವರ್ಷದೊಳಗಿನವರಿಗೆ ಲಸಿಕೆ ಹಾಕುವ ಪ್ರಯೋಗಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.'2 ರಿಂದ 18 ವರ್ಷ ವಯಸ್ಸಿನವರಿಗೆ 2/3 ಹಂತದ ಕ್ಲಿನಿಕಲ್ ಪ್ರಯೋಗಗಳು ನಡೆಯುತ್ತಿವೆ. ಈ ಲಸಿಕಾ ಪ್ರಯೋಗದ ಫಲಿತಾಂಶಗಳು ಶೀಘ್ರದಲ್ಲೇ ಲಭ್ಯವಾಗುತ್ತವೆ. ಬಹುಶಃ ಸೆಪ್ಟೆಂಬರ್ ಅಥವಾ ಸೆಪ್ಟೆಂಬರ್ ನಂತರ, ನಾವು ಮಕ್ಕಳಿಗೆ ಲಸಿಕೆ ನೀಡಬಹುದು ಎಂದು ಅವರು ಹೇಳಿದರು.