ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಜಭವನಕ್ಕೆ ಭೇಟಿ ನೀಡಿದ್ದಾರೆ.
ಕುಮಾರಸ್ವಾಮಿ ಜತೆಗೆ ಟಿ ಶರವಣ ಇದ್ದಾರೆ. ಅತ್ತ ಸಿದ್ದರಾಮಯ್ಯ ಜತೆಗೆ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್ ತೆರಳಿದ್ದಾರೆ.
ಅಂತೂ ಹೈಡ್ರಾಮಾದ ಬಳಿಕ ದ್ವಿತೀಯ ಸ್ಥಾನದಲ್ಲಿದ್ದ ಕಾಂಗ್ರೆಸ್ ಮತ್ತು ತೃತೀಯ ಸ್ಥಾನದಲ್ಲಿದ್ದ ಜೆಡಿಎಸ್ ಜತೆ ಸೇರಿಕೊಂಡು ಕರ್ನಾಟಕದಲ್ಲಿ ಹೊಸ ಸರ್ಕಾರ ರಚಿಸಲು ಮುಂದಾಗಿದೆ. ಎರಡೂ ಪಕ್ಷದ ನಾಯಕರು ಇದೀಗ ರಾಜ್ಯಪಾಲರ ಭೇಟಿಗೆ ಕಾಯುತ್ತಿದ್ದಾರೆ. ರಾಜ್ಯಪಾಲರ ನಡೆ ಏನೆಂಬ ಕುತೂಹಲ ಮೂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.