Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ನಿರಂತರ ಮಳೆಯಿಂದಾಗಿ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತವಾಗಿದೆ.
ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಾಚರಣೆ ನಡೆಸಿ, ವಾಹನ ಸವಾರರಿಗೆ ಅನುಕೂಲ ಮಾಡಿಕೊಡುವಂತೆ ಇಂಧನ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.
ಆಗುಂಬೆ ಘಾಟಿಯ ಮೂರು, ನಾಲ್ಕು ಮತ್ತು ಹತ್ತನೇ ಸುತ್ತಿನ ಮಧ್ಯದಲ್ಲಿ ಭೂಕಸಿತ ಸಂಭವಿಸಿದ ಸ್ಥಳದಲ್ಲಿ ತಕ್ಷಣ ಪರಿಹಾರ ಕಾರ್ಯ ಪ್ರಾರಂಭಿಸುವಂತೆ ಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅವರು, ಯಾವುದೇ ಅಹಿತಕರ ಘಟನೆಗೆ ಅವಕಾಶವಿಲ್ಲದಂತೆ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ರಾತ್ರಿಯಿಂದಲೇ ಈ ಭಾಗದಲ್ಲಿ ಸಂಚಾರ ಸಮಸ್ಯೆ ಸೃಷ್ಟಿಯಾಗಿದ್ದು, ಸಂಜೆಯೊಳಗಾಗಿ ಯಥಾಸ್ಥಿತಿ ಕಾಪಾಡುವುದಕ್ಕೆ ಪ್ರಯತ್ನಿಸಿ ನಾಗರಿಕರಿಗೆ ಅನುಕೂಲ ಕಲ್ಪಿಸುವಂತೆ ತಿಳಿಸಿದ್ದಾರೆ.
ಭೂಕುಸಿತ,ಪರಿಹಾರ, ಸುನಿಲ್ ಕುಮಾರ್