Webdunia - Bharat's app for daily news and videos

Install App

ಮಂಗಳೂರು ಮಳೆ ಬಗ್ಗೆ ಸಿಎಂ ಎಚ್ ಡಿಕೆ, ಬಿಎಸ್ ವೈ ಮತ್ತಿತರರು ಏನು ಹೇಳಿದ್ದಾರೆ ನೋಡಿ

Webdunia
ಬುಧವಾರ, 30 ಮೇ 2018 (10:24 IST)
ಮಂಗಳೂರು: ಪೂರ್ವ ಮುಂಗಾರಿನ ಅಬ್ಬಾರಕ್ಕೆ ತತ್ತರಿಸಿರುವ ಮಂಗಳೂರಿನ ಜನತೆಗೆ ಸಿಎಂ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತಿತರು ಸಹಾಯ ಹಸ್ತ ಚಾಚಿದ್ದಾರೆ.

ಮಹಾ ಮಳೆಯಿಂದ ಮಂಗಳೂರು ಸಂಪೂರ್ಣ ಜಲಾವೃತಗೊಂಡ ಸುದ್ದಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಸಿಎಂ ಕುಮಾರಸ್ವಾಮಿ, ಅಗತ್ಯ ಪರಿಹಾರ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೂಡಾ ಮಹಾ ಮಳೆಯ ಬಗ್ಗೆ ಟ್ವೀಟ್ ಮಾಡಿದ್ದು, ಕೇಂದ್ರ ಗೃಹಸಚಿವರಿಗೆ ವಿಷಯ ತಿಳಿಸಿದ್ದೇನೆ. ರಾಷ್ಟ್ರೀಯ ವಿಪತ್ತು ದಳದ ಸಿಬ್ಬಂದಿ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದಿದ್ದಾರೆ.

ನಟ, ಬಿಜೆಪಿ ನಾಯಕ ಜಗ್ಗೇಶ್ ಕೂಡಾ ತಮ್ಮ ಟ್ವಿಟರ್ ಮೂಲಕ ಮಳೆಗೆ ಸಂಕಷ್ಟಕ್ಕೀಡಾಗಿರುವ ಜನರ ಬಗ್ಗೆ ಅನುಕಂಪ ವ್ಯಕ್ತಪಡಿಸಿದ್ದು, ನಮ್ಮಿಂದ ಸಾಧ್ಯವಾದ ಎಲ್ಲಾ ಸಹಾಯ ಮಾಡೋಣ ಎಂದು ಕರೆಕೊಟ್ಟಿದ್ದಾರೆ.

ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಪರಿಹಾರ ಕಾರ್ಯ ಮಾಡಲು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments