Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ  ಇಳಿಕೆ
ನವದೆಹಲಿ , ಮಂಗಳವಾರ, 2 ಆಗಸ್ಟ್ 2022 (09:35 IST)
ನವದೆಹಲಿ : ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಆಗಸ್ಟ್ 1 ರಿಂದ 36 ರೂ. ಕಡಿತಗೊಳಿಸಲಾಗಿದೆ.

ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು(ಒಎಂಎಸ್) 19 ಕೆ.ಜಿ ಯ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 36 ರೂ.ಗಳಷ್ಟು ಕಡಿಮೆಗೊಳಿಸಿದೆ.

ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆಯಿಂದಾಗಿ ದೆಹಲಿಯಲ್ಲಿ 2,012.50 ರೂ. ಇದ್ದ ಪ್ರತೀ ಸಿಲಿಂಡರ್ಗಳ ಬೆಲೆ 1,976.50 ರೂ.ಗೆ ಇಳಿಕೆಯಾಗಿದೆ. ಇದು ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗಲಿದೆ.

ಬೆಂಗಳೂರಿನಲ್ಲಿ 2,100.50 ರೂ. ಇದ್ದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 2,063.50 ರೂ.ಗೆ ಇಳಿಕೆ ಆಗಿದೆ. ಕೋಲ್ಕತ್ತಾದಲ್ಲಿ 2,095.50 ರೂ. ಇದ್ದ ಸಿಲಿಂಡರ್ ಬೆಲೆ 2,132 ರೂ. ಇಳಿಕೆಯಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಕ್ಕೆ ಅಮಿತ್ ಶಾ ದಿಢೀರ್ ಭೇಟಿ!