Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕರ್ನಾಟಕದಲ್ಲಿ ಹೆಚ್ಚಾದ ಮದ್ರಾಸ್ ಐ ರೋಗ : ಆರೋಗ್ಯ ಇಲಾಖೆ

ಕರ್ನಾಟಕದಲ್ಲಿ ಹೆಚ್ಚಾದ ಮದ್ರಾಸ್ ಐ ರೋಗ : ಆರೋಗ್ಯ ಇಲಾಖೆ
ಬೆಂಗಳೂರು , ಸೋಮವಾರ, 31 ಜುಲೈ 2023 (09:48 IST)
ಬೆಂಗಳೂರು : ಪಿಂಕ್ ಐ ಅಥವಾ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದೆ.
 
ಇದರಿಂದ ಪೋಷಕರಲ್ಲಿ ಆತಂಕ ಹೆಚ್ಚಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ರೋಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾದ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಮದ್ರಾಸ್ ರೋಗದ ಲಕ್ಷಣಗಳು
1.            ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
2.            ಅತಿಯಾದ ಕಣ್ಣೀರು
3.            ಕಣ್ಣಿನಲ್ಲಿ ತುರಿಕೆ
4.            ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
5.            ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
6.            ದೃಷ್ಟಿ ಮಂಜಾಗುವುದು
7.            ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು

ತಡೆಯುವುದು ಹೇಗೆ ?
1.            ವೈಯಕ್ತಿಕವಾಗಿ ಸ್ವಚ್ಛತೆ ಗೆ ಆದ್ಯತೆ ಕೊಡಿ
2.            ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು.
3.            ಸೊಂಕಿತ ವ್ಯಕ್ತಿ ಬಳಸಿದ ಕರವಸ್ರ್ತ ಮತ್ತು ಇತರ ವಸ್ತುಗಳನ್ನು ಬಳಸಬಾರದು.
4.            ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು.
5.            ಸೊಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
6.            ತೀವ್ರ ಸೊಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಮದುವೆ ಯಾವಾಗ?: ಸೋನಿಯಾ ಕೊಟ್ಟ ಉತ್ತರವಾದ್ರು ಏನು?