Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಉಡುಪಿ : ಅರಬ್ಬೀ ಸಮುದ್ರದ ಅಬ್ಬರ ಜೋರಾಗಿರುವುದರಿಂದ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಆಕರ್ಷಣೆಗೋಸ್ಕರ ನಿರ್ಮಾಣವಾಗಿದ್ದ ತೇಲುವ ಸೇತುವೆ ವಾಟರ್ ಸ್ಪೋರ್ಟ್ಸ್ ನ್ನು ಸ್ಥಗಿತ ಮಾಡಲಾಗಿದೆ.
ರಾಜ್ಯದಲ್ಲಿಯೇ ಮೊದಲ ಬಾರಿಗೆ ನಿರ್ಮಾಣವಾಗಿದ್ದ ಸಮುದ್ರದ ತೇಲುವ ಸೇತುವೆ, ಮಲ್ಪೆ ಬೀಚ್ನ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ಮೂರು ದಿನಗಳಿಂದ ಸಾವಿರಾರು ಪ್ರವಾಸಿಗರು ಬಂದು ಮೋಜುಮಸ್ತಿಯಲ್ಲಿ ತೊಡಗಿದ್ದರು.
ಸಮುದ್ರದ ಅಬ್ಬರ ಜಾಸ್ತಿ ಇರುವುದರಿಂದ ತೇಲುವ ಸೇತುವೆ ಸೇರಿದಂತೆ ಎಲ್ಲಾ ವಾಟರ್ ಸ್ಪೋರ್ಟ್ಸ್ ಗಳನ್ನು ಸ್ಥಗಿತ ಮಾಡುವುದಾಗಿ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಹೇಳಿದೆ.