Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪಶ್ಚಿಮ ಬಂಗಾಳ : ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಬಾನಿಪುರ ಉಪಚುನಾವಣೆಯಲ್ಲಿ 58,000ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿದ್ದಂತ ಭಾಬಾನಿಪುರ ಉಪ ಚುನಾವಣೆಯ ಮತ ಏಣಿಕೆ ಕಾರ್ಯ ನಡೆಯಿತು. ಇಂತಹ ಮತಏಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆಯನ್ನು ದೀದಿ ಕಾಯ್ದುಕೊಂಡಿದ್ದರು. ಇದೀಗ ಅಂತಿಮ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್ ವಿರುದ್ಧ 58 ಸಾವಿರಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.