Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದ್ರಾಸ್ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಸೀದಿ ಅಪಾರ ಹಾನಿಗೊಳಗಾಗಿದೆ.
ಭಾರತೀಯ ಸೇನೆ, ಪೊಲೀಸ್, ಅಗ್ನಿಶಾಮಕ ಹಾಗೂ ತುರ್ತು ವಿಭಾಗದ ಸಹಾಯದಿಂದ ಬೆಂಕಿ ನಂದಿಸಲಾಗಿದೆ. ಮೂಲಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಾಮಿಯಾ ಮಸೀದಿಯ ಉಸ್ತುವಾರಿ, ದ್ರಾಸ್ನ ಅತ್ಯಂತ ಹಳೆಯ ಮಸೀದಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ದುರದೃಷ್ಟಕರ ಸಂಗತಿ.