ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ‍್ಳುವ ವಿಚಾರದಲ್ಲಿ ಕಾಂಗ್ರೆಸ್ ಬೆಂಬಲಕ್ಕೆ ಬಿಎಸ್ ಪಿ ನಾಯಕಿ ಮಾಯಾವತಿ ನಿರ್ಧರಿಸಿದ್ದಾರೆ. ಆದರೆ ಕೆಲವು ಷರತ್ತುಗಳನ್ನೂ ವಿಧಿಸಿದ್ದಾರೆ.
ಎನ್ ಡಿಎ ಕೂಟಕ್ಕೆ ತಕ್ಕ ಸಶಕ್ತ ಎದುರಾಳಿಯಾಗಲು ಕಾಂಗ್ರೆಸ್ ನೇತೃತ್ವದಲ್ಲಿ ಹಲವು ರಾಜಕೀಯ ಪಕ್ಷಗಳು ಒಂದಾಗುವ ಪ್ರಯತ್ನ ನಡೆದಿದೆ. ಈ ಸಂದರ್ಭದಲ್ಲಿ ಈ ಮಹಾ ಮೈತ್ರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚಿಸಲೂ ಬಿಎಸ್ ಪಿ ಪಕ್ಷ ಸಿದ್ಧವಿದೆ ಎಂದು ಮಾಯಾವತಿ ಹೇಳಿದ್ದಾರೆ.
ಆದರೆ ಸೀಟು ಹಂಚಿಕೆ ವಿಚಾರದಲ್ಲಿ ತಕರಾರು ತೆಗೆದಿದ್ದಾರೆ. ತಮಗೆ ಬೇಕಾದಷ್ಟು ಸ್ಥಾನಗಳನ್ನು ಬಿಟ್ಟುಕೊಟ್ಟರೆ ಮಾತ್ರ ಮೈತ್ರಿಗೆ ಸಿದ್ಧ ಎಂದು ಮಾಯಾವತಿ ಷರತ್ತು ವಿಧಿಸಿದ್ದಾರೆ. ಆದರೆ ಕಾಂಗ್ರೆಸ್ ಜತೆಗಿನ ಮೈತ್ರಿ ಬಗ್ಗೆ ಬಹಿರಂಗ ಹೇಳಿಕೆ ಕೊಡದಂತೆ ಮಾಯಾವತಿ ತಮ್ಮ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.