ಬಂಡಾಯದ ಎಚ್ಚರಿಕೆ ನೀಡಿದ ಮಾಜಿ ಸಚಿವ ಎಂಬಿ ಪಾಟೀಲ್

Webdunia
ಶನಿವಾರ, 9 ಜೂನ್ 2018 (08:42 IST)
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯಿಂದ ಶುರುವಾದ ಅಸಮಾಧಾನ ತಾರಕಕ್ಕೇರಿದ್ದು, ಡಿಸಿಎಂ ಖಾತೆಗೆ ಪಟ್ಟು ಹಿಡಿದಿರುವ ಮಾಜಿ ಸಚಿವ ಎಂಬಿ ಪಾಟೀಲ್ ಬಂಡಾಯದ ಎಚ್ಚರಿಕೆ ನೀಡಿದ್ದಾರೆ.

ನನ್ನ ಜತೆ 20 ಶಾಸಕರಿದ್ದಾರೆ ಎಂದು ಹೈಕಮಾಂಡ್ ಗೆ ಪಾಟೀಲ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ನಿನ್ನೆಯಷ್ಟೇ ಸಿಎಂ ಕುಮಾರಸ್ವಾಮಿ ಪಾಟೀಲ್ ಜತೆಗೆ ಮಾತುಕತೆ ನಡೆಸಿದ್ದರು. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಹೈಕಮಾಂಡ್ ಪಾಟೀಲ್ ಗೆ ಬುಲಾವ್ ನೀಡಿದೆ.

ಅತೃಪ್ತರಿಗೆ ಎಂಬಿ ಪಾಟೀಲ್ ನೇತೃತ್ವ ವಹಿಸಿದ್ದಾರೆ. ಸತೀಶ್ ಜಾರಕಿಹೊಳಿ ಸೇರಿದಂತೆ ಸುಮಾರು 20 ಅಸಮಾಧಾನಿತ ಶಾಸಕರು ಪಾಟೀಲ್ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಶಾಸಕರೊಂದಿಗೆ ಎಂಬಿ ಪಾಟೀಲ್ ಈಗಾಗಲೇ ಸಭೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ. ಈ ಮೂಲಕ ನಾನು ಏಕಾಂಗಿಯಲ್ಲ ಎಂದು ಸಂದೇಶ ರವಾನಿಸಿದ್ದಾರೆ. ಇದು ಸಮ್ಮಿಶ್ರ ಸರ್ಕಾರಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

ಮುಂದಿನ ಸುದ್ದಿ
Show comments