ಶಾಂತಿನಗರದ ಬಿಟಿಎಸ್ ರಸ್ತೆಯಲ್ಲಿರುವ ಪಿಜಿಯೊಂದಕ್ಕೆ ಮಧ್ಯರಾತ್ರಿಯಲ್ಲಿ ಕಾಮುಕನೊಬ್ಬ ನುಗ್ಗಿದ್ದಾನೆ. ಆಗ ಅಲ್ಲಿ ನಿದ್ದೆ ಮಾಡುತ್ತಿದ್ದ ಯುವತಿಯರ ಅಂಗಾಂಗ ಮುಟ್ಟುವುದಲ್ಲದೆ, ಅಪ್ಪಿಕೊಂಡು ದೌರ್ಜನ್ಯ ಎಸಗಿದ್ದಾನೆ. ಆಗ ಆತಂಕಗೊಂಡ ಯುವತಿಯರು ಕಿರುಚಾಡಿದಾಗ ಕಾಮುಕ ಅಲ್ಲಿಂದ ಪರಾರಿಯಾಗಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಯುವತಿಯರು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯು ಪಿಜಿಯಲ್ಲಿ ಸಿಸಿಟಿವಿ ಇಲ್ಲದಿರುವುನ್ನು ಅರಿತುಕೊಂಡೇ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.