Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಶಾಸಕ ಎ.ಎಸ್.ಪಾಟೀಲ್ ನೀತಿ ಸಂಹಿತೆ ಉಲ್ಲಂಘನೆ: ಅಧಿಕಾರಿಗಳ ದಾಳಿ

ಶಾಸಕ ಎ.ಎಸ್.ಪಾಟೀಲ್ ನೀತಿ ಸಂಹಿತೆ ಉಲ್ಲಂಘನೆ: ಅಧಿಕಾರಿಗಳ ದಾಳಿ
ವಿಜಯಪುರ , ಮಂಗಳವಾರ, 27 ಮಾರ್ಚ್ 2018 (19:15 IST)
ವಿಜಯಪುರ: ರಾಜ್ಯ ವಿಧಾನ ಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ನೀತಿ ಸಂಹಿತೆ ಪಾಲಿಸಲು ಅಧಿಕಾರಿಗಳು ಮುಂದಾಗಿದ್ದು, ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿರುವ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ನಿವಾಸಕ್ಕೆ ತಹಸೀಲ್ದಾರ್, ಪಿಎಸೈ, ಮುಖ್ಯಾಧಿಕಾರಿ ಭೇಟಿ ನೀಡಿ ಅಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮ ಸ್ಥಗಿತಗೊಳಿಸಲು ಸೂಚನೆ ನೀಡಿದ ಘಟನೆ ವರದಿಯಾಗಿದೆ. 
ಅಧಿಕಾರಿಗಳ ಕ್ರಮಕ್ಕೆ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದೆ. ಇದು ರಾಜಕೀಯ ಕಾರ್ಯಕ್ರಮ ಅಲ್ಲ ಎಂದು ನಡಹಳ್ಳಿ ಹೇಳಿದ್ದಾರೆ. ಆದರೆ
 
ಕಾರ್ಯಕ್ರಮಕ್ಕೆ ಆಗಮಿಸಿದ ಮುತೈದೆಯರಿಗೆ ಅರಿಷಿಣ, ಕುಂಕುಮ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಶಾಸಕ ನಡಹಳ್ಳಿ ಮನೆಯನ್ನು ಅಧಿಕಾರಿಗಳು ಶೋಧಿಸಿದರು. ಅಲ್ಲದೇ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಧಾರ್ಮಿಕ ಕಾರ್ಯಕ್ರಮದ ನೆಪದಲ್ಲಿ ಸೀರೆ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಹೀಗಾಗಿ ಅಧಿಕಾರಿಗಳ ಈ  ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಭೇಟಿ ಬಳಿಕ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ