Webdunia - Bharat's app for daily news and videos

Install App

ಇಸ್ಲಾಮಾಬಾದ್ನಲ್ಲಿ ಮೊಬೈಲ್ ಸೇವೆ ಸ್ಥಗಿತ! ಯಾಕೆ?

Webdunia
ಶುಕ್ರವಾರ, 17 ಡಿಸೆಂಬರ್ 2021 (12:04 IST)
ಇಸ್ಲಾಮಾಬಾದ್ : ಇಸ್ಲಾಮಿಕ್ ಸಹಕಾರ ಸಂಘಟನೆಯು (ಓಐಸಿ) ವಿದೇಶಾಂಗ ಸಚಿವರೊಂದಿಗೆ ಅಧಿವೇಶನ ಆಯೋಜಿಸಿದ್ದು, ರಾಜಧಾನಿ ಇಸ್ಲಾಮಾಬಾದ್ನಲ್ಲಿ 3 ದಿನಗಳವರೆಗೂ ಮೊಬೈಲ್ ಫೋನ್ ಸೇವೆ ಸ್ಥಗಿತಗೊಳಿಸುತ್ತಿರುವುದಾಗಿ ಪಾಕಿಸ್ತಾನ ಘೋಷಿಸಿದೆ.

ಒಐಸಿಯು ವಿದೇಶಾಂಗ ಸಚಿವರ ಜೊತೆ ಅಧಿವೇಶನವನ್ನು ಶುಕ್ರವಾರ ಪ್ರಾರಂಭಿಸುವುದರಿಂದ ಡಿಸೆಂಬರ್ 17 ರಿಂದ 19ರವರೆಗೂ ಮೂರು ದಿನಗಳವರೆಗೆ ಮೊಬೈಲ್ ಫೋನ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಾಗಿ ಆಂತರಿಕ ಸಚಿವಾಲಯ ಪ್ರಕಟಿಸಿದೆ. 

ಆಗಸ್ಟ್ನಲ್ಲಿ ತಾಲಿಬಾನ್ ಕಾಬೂಲ್ ಅನ್ನು ವಶಪಡಿಸಿಕೊಂಡ ನಂತರ ಅಗತ್ಯವಿರುವ ಅಫ್ಘಾನಿಸ್ತಾನದ ಲಕ್ಷಾಂತರ ಜನರಿಗೆ ಆಹಾರ, ಔಷಧ ಮತ್ತು ಆಶ್ರಯವನ್ನು ಒದಗಿಸುವ ಬಗ್ಗೆ ಒಐಸಿ ಅಧಿವೇಶನದಲ್ಲಿ ಚರ್ಚೆ ನಡೆಸಲಿದೆ.

ಅಧಿವೇಶನವನ್ನು ಆಯೋಜಿಸಲು ಸಂಸತ್ ಭವನದ ನಿರ್ವಹಣೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಂಟು ದಿನಗಳ ಕಾಲ ಹಸ್ತಾಂತರಿಸಲಾಗಿದೆ. ಈ ಕುರಿತಂತೆ ಸಮಾಲೋಚನೆಗಳು ಇನ್ನೂ ನಡೆಯುತ್ತಿರುವುದರಿಂದ ಈ ವಿಷಯದ ಬಗ್ಗೆ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಸದ್ಯ ಮೊಬೈಲ್ ಸೇವೆ ಸ್ಥಗಿತಗೊಳಿಸುವ ಸಮಯ ಮತ್ತು ದಿನಾಂಕಗಳನ್ನು ಶುಕ್ರವಾರ ಅಂತಿಮಗೊಳಿಸಲಾಗುವುದು ಎಂದು ಆಂತರಿಕ ಸಚಿವ ಶೇಖ್ ರಶೀದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments