ನವದೆಹಲಿ : ದಲಿತ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಆಯಂಡ್ ಇಂಡಸ್ಟ್ರೀಸ್ [DICCI] ಅಧ್ಯಕ್ಷ ಮಿಲಿಂದ್ ಕಾಂಬ್ಳೆ ಅವರು ಮೋದಿ ಸರ್ಕಾರದ ಕಾರ್ಯವೈಖರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ದಲಿತರ ಶ್ರೇಯೋಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುವುದರಿಂದ ಹಿಡಿದು, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವವರೆಗೂ, ನರೇಂದ್ರ ಮೋದಿ ಸರ್ಕಾರವು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರಕ್ಕಿಂತ ಉತ್ತಮವಾಗಿ ಕೆಲಸ ಮಾಡಿದೆ’ ಎಂದು ಕಾಂಬ್ಳೆ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಮುದ್ರಾ ಯೋಜನೆಯನ್ನು ಪ್ರಶಂಸಿಸಿದ ಕಾಂಬ್ಳೆ, ‘ಆರ್ಥಿಕ ಒಳಗೊಳ್ಳುವಿಕೆಯ ದೃಷ್ಟಿಯಿಂದ ಈ ಯೋಜನೆ ಬಹಳ ಮಹತ್ವಕಾರಿಯಾಗಿದೆ. ಈ ಯೋಜನೆಯಿಂದ ಸುಮಾರು 2.75 ಕೋಟಿ ದಲಿತ ಯುವಜನರು ಪ್ರಯೋಜನ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ