Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಂಪುಟ ರಚನೆಗೆ ಮೋದಿ ಮಾಸ್ಟರ್ ಪ್ಲಾನ್..!

ಸಂಪುಟ ರಚನೆಗೆ ಮೋದಿ ಮಾಸ್ಟರ್ ಪ್ಲಾನ್..!
ನವದೆಹಲಿ , ಶುಕ್ರವಾರ, 18 ಮಾರ್ಚ್ 2022 (14:25 IST)
ನವದೆಹಲಿ :  ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಸಚಿವರ ಆಯ್ಕೆಗೆ ಭವಿಷ್ಯದ ಮಾಸ್ಟರ್ ಪ್ಲಾನ್ ಹೆಣೆದಿದೆ.

2024ರಲ್ಲೂ ಕೇಂದ್ರದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವಂತಾಗಬೇಕು ಎಂಬ ಉದ್ದೇಶದಿಂದ ಯುವ ನಾಯಕರಿಗೆ ಆದ್ಯತೆ ನೀಡುವುದೂ ಸೇರಿದಂತೆ 4 ರಾಜ್ಯಗಳ ಸಚಿವ ಸಂಪುಟ ರಚನೆಯನ್ನು ಬಹಳ ಲೆಕ್ಕಾಚಾರದಿಂದ ಮಾಡಲು ಯೋಜಿಸಿದೆ.

ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಇದಕ್ಕೆ ರೂಪುರೇಷೆಗಳನ್ನು ಹಾಕಿಕೊಟ್ಟಿದ್ದು, ಅದರಂತೆಯೇ ಪ್ರಕ್ರಿಯೆ ಆರಂಭವಾಗಿದೆ ಎಂದು ರಾಷ್ಟ್ರಮಟ್ಟದ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಉತ್ತರಪ್ರದೇಶ, ಉತ್ತರಾಖಂಡ, ಗೋವಾ ಹಾಗೂ ಮಣಿಪುರದಲ್ಲಿ ನೂತನ ಸಚಿವರ ಆಯ್ಕೆ ವೇಳೆ ಜಾತಿ, ವಲಯವಾರು ಪ್ರಾತಿನಿಧ್ಯ, ಎಸ್ಸಿ/ಎಸ್ಟಿ, ಒಬಿಸಿಗೆ ಪ್ರಾತಿನಿಧ್ಯ, ಮಹಿಳೆಯರು, ಶೈಕ್ಷಣಿಕ ಹಿನ್ನೆಲೆ ಮತ್ತು ವಿಶೇಷವಾಗಿ ಯುವ ಸಮೂಹವನ್ನು ಗಮನದಲ್ಲಿಟ್ಟುಕೊಳ್ಳಲು ನಿರ್ಧರಿಸಲಾಗಿದೆ.

ಈ ಸಂಬಂಧ ಈಗಾಗಲೇ ಉತ್ತರಪ್ರದೇಶ, ಮಣಿಪುರ, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳಲ್ಲಿ ಗೆದ್ದ ಎಲ್ಲಾ ಅಭ್ಯರ್ಥಿಗಳ ಪೂರ್ಣ ವಿವರ ರವಾನಿಸುವಂತೆ ದಿಲ್ಲಿ ನಾಯಕರು ನಾಲ್ಕೂ ರಾಜ್ಯಗಳ ಪಕ್ಷದ ಘಟಕಗಳಿಗೆ ಸೂಚಿಸಿದ್ದಾರೆ.

ಅದರಲ್ಲೂ, ‘ಸಂಪುಟಕ್ಕೆ ಯುವಕರ ಆಯ್ಕೆ ವೇಳೆ ಮುಂದಿನ 25 ವರ್ಷದಲ್ಲಿ ಅವರು ರಾಜ್ಯದಲ್ಲಿ ಪಕ್ಷದ ಹೊಸ ನಾಯಕತ್ವ ಒದಗಿಸುವಂಥ ಶಕ್ತಿ ಹೊಂದಿರಬೇಕು. ಅಂಥವರಿಗೆ ಆದ್ಯತೆ ನೀಡಬೇಕು’ ಎಂದು ಇತ್ತೀಚೆಗೆ ಈ ಕುರಿತು ನಡೆದ ಸಭೆಯಲ್ಲಿ ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನೇನು ಯೋಚನೆ?
1.ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ
2. ಈ 4 ರಾಜ್ಯಗಳಲ್ಲಿ ಸಂಪುಟ ರಚನೆ ವೇಳೆ ಜಾತಿ, ವಲಯವಾರು ಪ್ರಾತಿನಿಧ್ಯ ಹಂಚಿಕೆ
3. ಎಸ್ಸಿ-ಎಸ್ಟಿ, ಒಬಿಸಿ ಜತೆ ಸ್ತ್ರೀಯರು, ಉತ್ತಮ ಶೈಕ್ಷಣಿಕ ಹಿನ್ನೆಲೆ ಇರುವವರಿಗೂ ಆದ್ಯತೆ
4. ವಿಶೇಷವಾಗಿ ಯುವ ಸಮೂಹವನ್ನು ಗಮನದಲ್ಲಿಟ್ಟು ಸಂಪುಟ ರಚನೆಗೆ ತೀರ್ಮಾನ
5. 60 ಸದಸ್ಯರ ಉತ್ತರ ಪ್ರದೇಶ ಸಂಪುಟದಲ್ಲಂತೂ 20 ಜನ ಹೊಸಬರಿಗೆ ಸ್ಥಾನ ಸಾಧ್ಯತೆ

Share this Story:

Follow Webdunia kannada

ಮುಂದಿನ ಸುದ್ದಿ

ಆಯುರ್ವೇದ ಮಸಾಜ್ ಮಾಡೋ ನೆಪದಲ್ಲಿ ಅತ್ಯಾಚಾರ !