Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಾಹನ ಸವಾರರೇ ಹುಷಾರ್..!ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ!

ವಾಹನ ಸವಾರರೇ ಹುಷಾರ್..!ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ!
ಬೆಂಗಳೂರು , ಭಾನುವಾರ, 30 ಜುಲೈ 2023 (11:46 IST)
ಬೆಂಗಳೂರು : ಎಕ್ಸ್ಪ್ರೆಸ್ವೇಯಲ್ಲಿ ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೊಗಿದ್ದು ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ.

ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್ನಿಂದ ಆರ್ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರಲಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅಲೋಕ್ ಕುಮಾರ್, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ಅಪಘಾತಗಳು ಮತ್ತು ಸಾವುನೋವುಗಳ ಸಂಖ್ಯೆಗಳನ್ನು ಕಡಿಮೆ ಮಾಡಲು ಈ ಉಪಕ್ರಮಗಳು ಸಹಾಯ ಮಾಡುತ್ತವೆ ಎಂದು ಭಾವಿಸುತ್ತೇವೆ. ಭಾರತದ ರಸ್ತೆಯಲ್ಲಿ ಅತಿವೇಗವೇ ಪ್ರಮುಖ ಕೊಲೆಗಾರ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಹರಿಕೋಟಾದಿಂದ ಸಿಂಗಾಪುರದ 7 ಉಪಗ್ರಹಗಳ ಉಡಾವಣೆ