Publish Date: Tue, 14 Dec 2021 (16:06 IST)
Updated Date: Tue, 14 Dec 2021 (16:09 IST)
ದೆಹಲಿಯಲ್ಲಿ ಹೊಸದಾಗಿ ನಾಲ್ಕು ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 45ಕ್ಕೆ ಏರಿದೆ.
ಇನ್ನು ದೆಹಲಿಯಲ್ಲಿ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು, ಅವರೆಲ್ಲಾ ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ. ಅವರನ್ನು ಒಬ್ಬರು ಚೇತರಿಸಿಕೊಂಡಿದ್ದಾರೆ.
ಈ ಸಂಬಂಧ ಮಾತನಾಡಿದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ರಾಜ್ಯದಲ್ಲಿ ನಾಲ್ಕು ಹೊಸ ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆಯ ಆರಕ್ಕೆ ಏರಿದೆ.
ಆರು ಪ್ರಕರಣಗಳಲ್ಲಿ ಒಬ್ಬ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ, 35 ಕೋವಿಡ್ ಪಾಸಿಟಿವ್ ರೋಗಿಗಳು ಮತ್ತು 3 ಶಂಕಿತ ಪ್ರಕರಣಗಳನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.