Publish Date: Thu, 04 Aug 2022 (15:40 IST)
Updated Date: Thu, 04 Aug 2022 (15:42 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಿಂದ ಹೊಸ ನಿಯಮ ಜಾರಿಯಾಗಲಿದೆ.
ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ.
18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು ಓಡಾಡಬಹುದು. ಇಬ್ಬರು ಪುರುಷ ಸವಾರರಿಗೆ ಈ ರೂಲ್ಸ್ ಇದ್ದು, ಕೆಲವು ಬಾರಿ ಹಿಂಬದಿ ಸವಾರರು ದುಷ್ಕೃತ್ಯ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಈ ನಿಯಮ ಜಾರಿಯಾಗಲಿದೆ ಎಂದು ತಿಳಿಸಿದರು.
Ramya kosira
Publish Date: Thu, 04 Aug 2022 (15:40 IST)
Updated Date: Thu, 04 Aug 2022 (15:42 IST)