ನೈಟ್ ಕರ್ಫ್ಯೂ ಜಾರಿ?

Webdunia
ಶನಿವಾರ, 25 ಡಿಸೆಂಬರ್ 2021 (11:26 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ನಾಳಿನ ಸಭೆಯಲ್ಲಿ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ನೈಟ್ ಕರ್ಫ್ಯೂ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಏರುತ್ತಿದೆ. ಈವರೆಗೆ 31 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಅತಿಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ 7ನೇ ಸ್ಥಾನದಲ್ಲಿದೆ.

ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಈಗಾಗಲೇ ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದೇ ಕ್ರಮವನ್ನು ರಾಜ್ಯದಲ್ಲೂ ಮತ್ತೆ ಜಾರಿಗೊಳಿಸುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments