ನವದೆಹಲಿ: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಮೋದಿ ಸರ್ಕಾರಕ್ಕೆ ಅಗ್ನಿಪರೀಕ್ಷೆ ಎದುರಾಗಲಿದೆ.
ತೆಲುಗು ದೇಶಂ ಪಕ್ಷ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವುದಾಗಿ ಘೋಷಿಸಿತ್ತು. ಅದಕ್ಕೀಗ ಲೋಕಸಭೆ ಸ್ಪೀಕರ್ ಸುಮಿತ್ರ ಮಹಾಜನ್ ಒಪ್ಪಿಗೆ ನೀಡಿದ್ದು, ಮೊದಲ ದಿನವೇ ಈ ಅವಿಶ್ವಾಸ ಮತ ನಡೆಯಲಿದೆ.
ಅವಿಶ್ವಾಸ ಮತ ವಿಚಾರದಲ್ಲಿ ತೆಲುಗು ದೇಶಂ ಪಕ್ಷಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಸಾಥ್ ನೀಡಲಿವೆ. ಆದರೆ ಬಿಜೆಪಿಗೆ ತನ್ನ ಮಿತ್ರ ಪಕ್ಷಗಳ ಹೊರತಾಗಿ ಸಂಸತ್ತಿನಲ್ಲಿ ಬಹುಮತಕ್ಕೆ ಬೇಕಾದಷ್ಟು ಅಂದರೆ 273 ಸ್ಥಾನಗಳ ಸಂಖ್ಯಾ ಬಲವಿದೆ. ಹಾಗಾಗಿ ಸರ್ಕಾರದ ಮೇಲೆ ಈ ಮತ ಹೆಚ್ಚಿನ ಪರಿಣಾಮ ಬೀರದು ಎಂದೇ ಹೇಳಲಾಗಿದೆ. ಹಾಗಿದ್ದರೂ ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಇದು ವಿಪಕ್ಷಗಳ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.