Publish Date: Wed, 06 Jun 2018 (09:51 IST)
Updated Date: Wed, 06 Jun 2018 (09:53 IST)
ಬೆಂಗಳೂರು: ಇಂದು ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಶಾಸಕರ ಬೆಂಬಲಿಗರು, ಅಭಿಮಾನಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ರಾಜಭವನದ ಹೊರಗೆ ಬೃಹತ್ ಎಲ್ ಸಿಡಿ ಪರದೆ ಹಾಕಲಾಗುತ್ತಿದ್ದು, ಅದರ ಮೂಲಕವೇ ಅಭಿಮಾನಿಗಳು ಪ್ರಮಾಣ ವಚನ ಕಾರ್ಯಕ್ರಮ ವೀಕ್ಷಿಸಬೇಕಾಗಿದೆ.
ರಾಜಭವನದ ಒಳಗೆ 1500 ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿಐಪಿಗಳು, ಶಾಸಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ರಾಜಭವನದ ಸುತ್ತ ಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮಧ್ಯಾಹ್ನ 1.30 ರ ಬಳಿಕ ಈ ರಸ್ತೆಯಲ್ಲಿ ವಾಹನ ಸಂಚಾರವನ್ನೂ ನಿಷೇಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.