Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಕೋವಿಡ್ ಸಾಂಕ್ರಾಮಿಕದ ಮಧ್ಯೆ ತೆರಿಗೆಯನ್ನು ಹೆಚ್ಚಿಸದಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು.
ಹೀಗಾಗಿ ಈ ಬಾರಿಯ ಬಜೆಟ್ನಲ್ಲಿ ಜನರಿಂದ ಯಾವುದೇ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ಇಳಿದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಜೆಟ್ ಬಳಿಕ ಇಲಾಖೆಯ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿರುವ ಜನರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಬಾರದು ಎಂದು ಪ್ರಧಾನಿ ಮೋದಿ ಅವರು ಕಳೆದ ವರ್ಷ ಸೂಚಿಸಿದ್ದರು. ಈ ಕಾರಣಕ್ಕೆ ಈ ಬಾರಿಯೂ ಯಾವುದೇ ತೆರಿಗೆ ಹಾಕಿಲ್ಲ ಎಂದು ತಿಳಿಸಿದರು.
.