Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಕೋವಿಡ್-19 ವಿರುದ್ಧದ ಲಸಿಕೆಯನ್ನು ಪಡೆದುಕೊಳ್ಳುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಲಸಿಕೆ ಆದೇಶಗಳ ಮೂಲಕ ವ್ಯಕ್ತಿಗಳ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ಪ್ರಮಾಣೀಕರಣವೆಂದು ಕರೆಯಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ.
ಲಸಿಕೆಗಳ ಪ್ರತಿಕೂಲ ಪರಿಣಾಮಗಳ ಕುರಿತು ಜನರು ಮತ್ತು ವೈದ್ಯರಿಂದ ವರದಿಗಳನ್ನು ಸಂಗ್ರಹಿಸಿ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸುವುದರ ವಿರುದ್ಧದ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ದೇಶದಲ್ಲಿ ಕೋವಿಡ್-19 ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಮತ್ತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರಗಳು ಮುಂದಾಗಿವೆ.