ಬೆಂಗಳೂರು: ಉತ್ತರ ಕರ್ನಾಟಕವನ್ನು ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹುಟ್ಟಿದ ಧ್ವನಿ ದಿನೇ ದಿನೇ ಹೆಚ್ಚುತ್ತಿದೆ.
ಇದೇ ರೀತಿ ನಿರ್ಲಕ್ಷ್ಯ ಧೋರಣೆ ಮುಂದುವರಿದರೆ ಮುಂದಿನ ದಿನಗಳಲ್ಲಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿನ ಹೋರಾಟ ತೀವ್ರಗೊಳಿಸಲಾಗುವುದು ಎಂದು ಅಲ್ಲಿನ ನಾಯಕರು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಶಾಸಕ ಬಿ ಶ್ರೀರಾಮುಲು, ವಿವಿಧ ಮಠಾಧೀಶರು, ಪ್ರತ್ಯೇಕ ರಾಜ್ಯದ ಕೂಗಿಗೆ ನೇತೃತ್ವ ವಹಿಸಿದ್ದಾರೆ. ಅಗತ್ಯ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೂ ಹಿಂದೆ ಮುಂದೆ ನೋಡುವುದಿಲ್ಲ ಎಂದು ರಾಮುಲು ಹೇಳಿದ್ದಾರೆ.
ಆದರೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಕೆಲವು ಮುಖಂಡರು ಪ್ರತ್ಯೇಕ ರಾಜ್ಯದ ಬೇಡಿಕೆ ಸರಿಯಲ್ಲ ಎಂದಿದ್ದಾರೆ. ಆದರೆ ಸಿಎಂ ಕುಮಾರಸ್ವಾಮಿ ತಮ್ಮ ಆಯ್ಕೆಯ ನಾಲ್ಕೈದು ಜಿಲ್ಲೆಗಳನ್ನು ಬಿಟ್ಟು ಬೇರೆ ಜಿಲ್ಲೆಗಳತ್ತ ಗಮನಹರಿಸದೇ ಇರುವುದರಿಂದಲೇ ಇಂತಹ ಹೋರಾಟ ಶುರುವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.