Publish Date: Wed, 23 Feb 2022 (14:21 IST)
Updated Date: Wed, 23 Feb 2022 (19:24 IST)
ನವದೆಹಲಿ : ಕೊರೊನಾ ರೂಪಾಂತರ ತಳಿ ಓಮಿಕ್ರಾನ್, ಡೆಲ್ಟಾಗಿಂತ ಅಪಾಯಕಾರಿ ಅಲ್ಲದಿದ್ದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಮರ್ಥ್ಯವನ್ನು ಹೊಂದಿದೆ.
ಸ್ವತಃ ಓಮಿಕ್ರಾನ್ ಸೋಂಕಿಗೆ ತುತ್ತಾಗಿದ್ದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಓಮಿಕ್ರಾನ್ ಪರಿಣಾಮದ ಕುರಿತು ಅನುಭವ ಹಂಚಿಕೊಂಡಿದ್ದಾರೆ.
ನಿಮಗೆ ಗೊತ್ತೆ? ಓಮಿಕ್ರಾನ್ ಸೈಲೆಂಟ್ ಕಿಲ್ಲರ್ ಇದ್ದಂತೆ. ನಾನು ಕೋವಿಡ್ ಮೊದಲ ಅಲೆಯಲ್ಲಿ ಸೋಂಕಿಗೆ ತುತ್ತಾಗಿದ್ದಾಗ ಕೇವಲ ನಾಲ್ಕು ದಿನಗಳಲ್ಲಿ ಗುಣಮುಖನಾಗಿದ್ದೆ.
ಆದರೆ ಮೂರನೇ ಅಲೆಯಲ್ಲಿ ಸೋಂಕು ಪೀಡಿತನಾದಾಗಿನಿಂದ 25 ದಿನಗಳವರೆಗೂ ತೊಂದರೆ ಅನುಭವಿಸಿದ್ದೇನೆ. ಈಗಲೂ ಅದು ನನ್ನ ದೇಹದಲ್ಲಿ ಪರಿಣಾಮ ಬೀರುತ್ತಿದೆ ಎಂದು ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ.