Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಭಾರತದಲ್ಲಿ ಏರಿಕೆ ಕಂಡ ಓಮಿಕ್ರಾನ್!

ಭಾರತದಲ್ಲಿ ಏರಿಕೆ ಕಂಡ ಓಮಿಕ್ರಾನ್!
ಮುಂಬೈ , ಭಾನುವಾರ, 5 ಡಿಸೆಂಬರ್ 2021 (09:58 IST)
ಮುಂಬೈ : ದಕ್ಷಿಣ ಆಫ್ರಿಕಾದಿಂದ ದೆಹಲಿ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ಆಗಮಿಸಿದ ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ.
ಈ ಮೂಲಕ ದೇಶದಲ್ಲಿ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಂಡಿದೆ.
ಮಹಾರಾಷ್ಟ್ರದಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ 33 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 23 ರಂದು ದೆಹಲಿಗೆ ಬಂದಿದ್ದರು ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದರು. ನಂತರ ಅವರು ಮುಂಬೈಗೆ ವಿಮಾನದಲ್ಲಿ ತೆರಳಿದ್ದರು ಎಂದು ವರದಿಯಾಗಿದ್ದು, ಇಂದು ಅವರ ರಿಪೋರ್ಟ್ ಬಂದಿದ್ದು ಅದರಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ.
ದೇಶದಲ್ಲಿ ಮೊದಲ ಎರಡು ಪ್ರಕರಣಗಳು ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ ಪತ್ತೆಯಾಗಿತ್ತು. ಬಳಿಕ ಇಂದು ಗುಜರಾತ್ ಮೂಲದ ಜಾಮ್ನಗರ ನಿವಾಸಿ 72 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಓಮಿಕ್ರಾನ್  ಓಮಿಕ್ರಾನ್ ಸೋಂಕು ಪತ್ತೆಯಾಗಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ದಿನ ಕೋಟಿ ಲಸಿಕೆ !