ನವದೆಹಲಿ : ಲಸಿಕೆಯೆ ಅಭಿಯಾನ ಪ್ರಾರಂಭವಾದ ಬಳಿಕ 5ನೇ ಸಲ ಈ ದಾಖಲೆಯಾಗಿದೆ.
ಓಮಿಕ್ರೋನ್ ವೈರಸ್ ಪತ್ತೆಯಾಗಿರುವ ಬೆನ್ನಲ್ಲೇ ದೇಶಾದ್ಯಂತ ಮತ್ತೆ ಜನರು ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ.
ದೇಶದಲ್ಲಿ ಓಮಿಕ್ರೋನ್ ವೈರಸ್ ಬೆನ್ನಲ್ಲೇ ಕುಂಠಿತಗೊಂಡಿದ್ದ ಲಸಿಕಾ ಅಭಿಯಾನಕ್ಕೆ ಮತ್ತೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶನಿವಾರ ಒಂದೇ ದಿನ 1 ಕೋಟಿ ಲಸಿಕೆ ಡೋಸ್ಗಳನ್ನು ನೀಡಲಾಗಿದೆ.
2 ತಿಂಗಳ ಬಳಿಕ ಮೊದಲ ಬಾರಿಗೆ 1 ಕೋಟಿಗಿಂತ ಹೆಚ್ಚು ಡೋಸ್ ನೀಡಿದಂತಾಗಿದೆ. ಜೊತೆಗೆ ಇದುವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 127.5 ಕೋಟಿ ಡೋಸ್ ದಾಟಿದೆ. ಈ ಸಂಬಂಧ ನಿನ್ನೆ ರಾತ್ರಿ 8.15ರ ವೇಳೆಗೆ 1 ಕೋಟಿಗಿಂತ ಹೆಚ್ಚು ಡೋಸ್ ನೀಡಲಾಗಿದೆ.
ಲಸಿಕೆ ಅಭಿಯಾನ ಆರಂಭವಾಗಿದ್ದು, ಈವರೆಗೆ 5ನೇ ಸಲ ಒಂದು ದಿನದಲ್ಲಿ 1 ಕೋಟಿಗಿಂತ ಹೆಚ್ಚು ಲಸಿಕೆ ನೀಡಲಾಗಿದೆ. ತನ್ನಮೂಲಕ ವಿಶ್ವದಲ್ಲೇ ಅತಿದೊಡ್ಡ ಲಸಿಕೆ ಅಭಿಯಾನವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೊಸ ಎತ್ತರಕ್ಕೆ ತಲುಪುತ್ತಿದೆ ಎಂದು ಹರ್ಷಿಸಿದ್ದಾರೆ. ಈ ಹಿಂದೆ ಆ.27ರಂದು ದೇಶಾದ್ಯಂತ 1 ಕೋಟಿಗಿಂತ ಹೆಚ್ಚು ಡೋಸ್ ನೀಡಲಾಗಿತ್ತು. ಪ್ರಧಾನಿ ಮೋದಿ ಅವರ ಜನ್ಮದಿನದಂದು 2 ಕೋಟಿ ಜನಕ್ಕೆ ಲಸಿಕೆ ನೀಡಲಾಗಿತ್ತು.