Webdunia - Bharat's app for daily news and videos

Install App

ಆನ್ಲೈನ್ ಫುಡ್, ಅಮೆಜಾನ್, ಪ್ಲಿಪ್ಕಾರ್ಟ್ ಹೋಂ ಡೆಲಿವರಿ ಬಂದ್!

Webdunia
ಶನಿವಾರ, 9 ಸೆಪ್ಟಂಬರ್ 2023 (10:27 IST)
ನವದೆಹಲಿ : ಸೆಪ್ಟೆಂಬರ್ 8-10 ರಂದು ದೆಹಲಿಯಲ್ಲಿ ವಾಣಿಜ್ಯ ಸೇವೆಗಳನ್ನು ನಿಲ್ಲಿಸಿರುವುದರಿಂದ ಕ್ಲೌಡ್ ಕಿಚನ್ಗಳು, ಹೋಟೆಲ್ಗಳು ಬಂದ್ ಇರಲಿದ್ದು ಆನ್ಲೈನ್ ಫುಡ್ ಡೆಲಿವರಿ ಇರುವುದಿಲ್ಲ. ಇದರ ಜೊತೆಗೆ ಅಮೆಜಾನ್, ಫ್ಲಿಪ್ಕಾರ್ಟ್ನಂತಹ ಹೋಂ ಡೆಲಿವರಿ ಸರ್ವಿಸ್ಗಳನ್ನೂ ಅನುಮತಿಸಲಾಗುವುದಿಲ್ಲ ಎಂದು ವಿಶೇಷ ಪೊಲೀಸ್ ಆಯುಕ್ತ ಎಸ್ಎಸ್ ಯಾದವ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನಗರದಲ್ಲಿ 3 ದಿನ ಲಾಕ್ಡೌನ್ ಊಹಾಪೋಹವನ್ನು ತಳ್ಳಿಹಾಕಿದ್ದಾರೆ. ಜಿ20 ಶೃಂಗಸಭೆಯ ಸಮಯದಲ್ಲಿ ಯಾವುದೇ ಲಾಕ್ಡೌನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೆಪ್ಟೆಂಬರ್ 7ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 10 ರ ಮಧ್ಯರಾತ್ರಿಯವರೆಗೆ ದೆಹಲಿಗೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂದು ತಿಳಿಸಿದರು.

ದೆಹಲಿ ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕ ರಜೆಯನ್ನು ಘೋಷಿಸಿದೆ. ನಗರದಲ್ಲಿನ ಅಂಗಡಿಗಳು, ವ್ಯಾಪಾರಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸೆಪ್ಟೆಂಬರ್ 8, 9 ಮತ್ತು 10 ರಂದು ತಮ್ಮ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಸರ್ಕಾರ ನಿರ್ದೇಶಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments