Publish Date: Tue, 09 May 2023 (10:30 IST)
Updated Date: Tue, 09 May 2023 (10:51 IST)
ಬೆಂಗಳೂರು : ಜಿದ್ದಾಜಿದ್ದಿನ ಅಖಾಡ ಆಗಿರೋ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು (ಸೋಮವಾರ) ಅಂತ್ಯ. ಇಂದಿನಿಂದಲೇ ಮದ್ಯ ಮಾರಾಟಕ್ಕೆ ಬ್ರೇಕ್ ಬೀಳಲಿದೆ. ಜೊತೆಗೆ ಸಂಜೆ 6 ಗಂಟರೆವರೆಗೂ ಮತದಾನಕ್ಕೆ ಅವಕಾಶ ನೀಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ಎರಡೇ ದಿನ ಬಾಕಿ ಇದೆ. ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು ಮಂಗಳವಾರ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ.
ಮತದಾನ ನಡೆಯುವ 48 ಗಂಟೆ ಮುಂಚೆ ಯಾವುದೇ ರೋಡ್ ಶೋ, ತೆರೆದ ವಾಹನದಲ್ಲಿ ಪ್ರಚಾರ ಮಾಡುವಂತಿಲ್ಲ. ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಒಂದು ವೇಳೆ ಕಾಣಿಸಿಕೊಂಡರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ.