Publish Date: Mon, 18 Oct 2021 (15:38 IST)
Updated Date: Mon, 18 Oct 2021 (17:40 IST)
ಬೆಂಗಳೂರು : ಕೊವಿಡ್ ಹೊಸ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಅದರಂತೆ ಈಜುಕೊಳ ಕಾರ್ಯಾಚರಣೆಗೆ ಕೆಲವು ನಿರ್ಬಂಧಗಳ ಅನುಸಾರ ಅವಕಾಶ ನೀಡಲಾಗಿದೆ.
ನೂತನ ಮಾರ್ಗಸೂಚಿಯಲ್ಲಿ ಶಾಲಾ ಮರು ಪ್ರಾರಂಭದ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ಈಜುಕೊಳಗಳಲ್ಲಿ ಶೇಕಡಾ 50 ರಷ್ಟು ಕಾರ್ಯಚಾರಣೆಗೆ ಅವಕಾಶ ನೀಡಲಾಗಿದೆ. ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ರಿಲ್ಯಾಕ್ಸೇಷನ್ ನೀಡಲಾಗಿದೆ. ಆದರೆ, ಯು.ಕೆ ಪ್ರಯಾಣಿಕರಿಗೆ ಕ್ವಾರಂಟೈನ್ ನಿಯಮ ಮುಂದುವರಿಕೆ ಮಾಡಲಾಗಿದೆ.