Publish Date: Sat, 04 Aug 2018 (09:27 IST)
Updated Date: Sat, 04 Aug 2018 (09:28 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಯುಪಿಎ ಕೂಟದ ಪಕ್ಷಗಳು ಕೇಂದ್ರ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸದಂತೆ ಮತ್ತು ಮತ ಪತ್ರಗಳನ್ನೇ ಬಳಸುವಂತ ವಿಪಕ್ಷಗಳು ಚುನಾವಣಾ ಆಯೋಗವನ್ನು ಒತ್ತಾಯಿಸಲಿದ್ದಾರೆ.
ವಿದ್ಯುನ್ಮಾನ ಮತಯಂತ್ರ ದೋಷಪೂರಿತವಾಗಿದೆ. ಇದನ್ನು ನಿಷೇಧಿಸಬೇಕು ಎಂದು ಬಿಎಸ್ ಪಿ ನಾಯಕಿ ಮಾಯಾವತಿ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿಪಕ್ಷ ನಾಯಕರು ಮೊದಲಿನಿಂದಲೂ ವಾದಿಸುತ್ತಲೇ ಬಂದಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಗೆ ಇದನ್ನು ಬಳಸಬಾರದು. ಮತ್ತೆ ಹಳೆಯ ಮತಪತ್ರ ಬಳಕೆಯನ್ನೇ ಜಾರಿಗೆ ತರಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿವೆ. ಇದೀಗ ಆರ್ ಜೆಡಿ ಕೂಡಾ ಈ ವಾದಕ್ಕೆ ಧ್ವನಿಗೂಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.